ಕಠ್ಮಂಡು: ನೇಪಾಳದಲ್ಲಿ ಸಂಸತ್ ವಿಸರ್ಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿ ಸಂಘಟನೆ ಮತ್ತು ನೇಪಾಳ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ಸಂಸತ್ ಪ್ರವೇಶಿಸಲು ಯತ್ನಿಸಿದ್ದು ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಘರ್ಷಣೆ ಸಂಭವಿಸಿದೆ. ಪ್ರತಿಭಟನಾ ನಿರತರು ಪ್ರಧಾನಿ ಕೆ.ಪಿ.ಶರ್ಮಾ ಒಲಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಕಾನೂನು, ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಪ್ರಧಾನಿ, ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ. 2020ರ ಡಿಸೆಂಬರ್ 20ರಂದು ಪ್ರಧಾನಿ ಒಲಿ ಅವರು ಸಂಸತ್ ವಿಸರ್ಜಿಸಿದ್ದರು. ಅದಾದ ಬಳಿಕ ನೇಪಾಳದಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ.
ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.