ಲಾಹೋರ್: ಪಾಕಿಸ್ತಾನದ ಮುಸ್ಲಿಂ ಲೀಗ್– ನವಾಜ್ (ಪಿಎಂಎಲ್–ಎನ್) ಪಕ್ಷದ ಮುಖ್ಯಸ್ಥ ಹಾಗೂ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರು ಪಂಜಾಬ್ ರಾಜ್ಯದ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಮೇಲ್ಮನವಿ ನ್ಯಾಯಾಲಯ ಮಂಗಳವಾರ ಆರೋಪ ಹೊರಿಸಿದೆ.
ಶೆಹಬಾಜ್ ಅವರ ಪುತ್ರ, ಪಂಜಾಬ್ ವಿಧಾನಸಭೆ ವಿರೋಧ ಪಕ್ಷದ ನಾಯಕ ಹಮ್ಜಾ ಅವರು ಸಹ ರಮ್ಜಾನ್ ಶುಗರ್ ಮಿಲ್ಸ್ ಪ್ರಕರಣದಲ್ಲಿ ಆರೋಪಿ ಎಂದು ನ್ಯಾಯಾಲಯ ಹೇಳಿರುವುದಾಗಿ ‘ಡಾನ್’ ಪತ್ರಿಕೆ ವರದಿ ಮಾಡಿದೆ.
‘ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿಲ್ಲ ಮತ್ತು ಸಾರ್ವಜನಿಕ ಹಣವನ್ನು ಅಕ್ರಮವಾಗಿ ಬಳಸಿಕೊಂಡಿಲ್ಲ. ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಷರೀಫ್ ಮತ್ತು ಹಮ್ಜಾ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು’ ಎಂದು ವರದಿಯಲ್ಲಿ ಹೇಳಲಾಗಿದೆ.
ನ್ಯಾಯಾಧೀಶ ನಜಮುಲ್ ಹಸನ್ ಅವರು ರಮ್ಜಾನ್ ಶುಗರ್ ಮಿಲ್ಸ್ ಪ್ರಕರಣದ ಮಾಹಿತಿಯನ್ನು ನೀಡುವಂತೆ ರಾಷ್ಟ್ರೀಯ ಹಕ್ಕುಬಾಧ್ಯತಾ ದಳದ(ಎನ್‌ಎಬಿ) ಪ್ರಾಸಿಕ್ಯೂಟರ್ ಅವರನ್ನು ಕೇಳಿದರು. ‘ಸಾರ್ವಜನಿಕ ಹಣವನ್ನು ಮಿಲ್ಸ್‌ಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಮ್ಜಾ ಅವರು ಇದರ ನಿರ್ದೇಶಕರಾಗಿದ್ದಾರೆ’ ಎಂದು ವಿಶೇಷ ಪ್ರಾಸಿಕ್ಯೂಟರ್ ವಾರೀಸ್ ಅಲಿ ಜಂಜುವಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.