ಕೊಲಂಬೊ: ದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾ ಸಿಬ್ಬಂದಿಯ ರಜೆಯನ್ನು ರದ್ದುಗೊಳಿಸಿ ರಕ್ಷಣಾ ಸಚಿವಾಲಯ ಆದೇಶ ಹೊರಡಿಸಿದೆ.
ಪ್ರಸ್ತುತ ಆರ್ಥಿಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ನಿರ್ವಹಿಸಲು ದೇಶದ ಜನರು ಬುದ್ಧಿವಂತಿಕೆ ತಾಳ್ಮೆಯಿಂದ ಸಹಕರಿಸಬೇಕು ಎಂದು ರಕ್ಷಣಾ ಸಚಿವಾಲಯ ಕರೆ ನೀಡಿದ್ದು ದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದೆ. ದೇಶದ ಜನರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿರುವ ರಾಜಪಕ್ಸ ಅವರ ರಾಜೀನಾಮೆಗೆ ಆಗ್ರಹಿಸಿ ಒಂದು ವಾರದಿಂದ ಪ್ರತಿಭಟನೆಗಳು ನಡೆಯುತ್ತಲೇ ಇವೆ.
ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆರಿದ್ದು, ಇಂಧನ, ಔಷಧಗಳು ಮತ್ತು ವಿದ್ಯುತ್ ಪೂರೈಕೆಯಲ್ಲಿ ತೀವ್ರ ಕೊರತೆಯಾಗಿದ್ದುಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಇಷ್ಟೆಲ್ಲಾ ಒತ್ತಡಗಳಿದ್ದರೂ ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆಗೆ ನಿರಾಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.