ADVERTISEMENT

ಶ್ರೀಲಂಕಾ: ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಬಂಧನ 

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2018, 14:27 IST
Last Updated 29 ಅಕ್ಟೋಬರ್ 2018, 14:27 IST
ಅರ್ಜುನ ರಣತುಂಗ
ಅರ್ಜುನ ರಣತುಂಗ   

ಕೊಲಂಬೊ: ರನಿಲ್‌ ನಿಷ್ಠ, ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರನ್ನು ಅಪಹರಿಸಲು ಸಿರಿಸೇನ ಬೆಂಬಲಿಗರ ಗುಂಪು ಯತ್ನಿಸಿದಾಗ ರಣತುಂಗ ಅಂಗರಕ್ಷಕರು ಹಾರಿಸಿದ ಗುಂಡಿಗೆ ವ್ಯಕ್ತಿಯೊಬ್ಬರು ಭಾನುವಾರಬಲಿಯಾಗಿದ್ದರು. ಈ ಪ್ರಕರಣದಲ್ಲಿ ರಣತುಂಗ ಅವರನ್ನು ಸೋಮವಾರ ಬಂಧಿಸಲಾಗಿದೆ.
ಕೊಲಂಬೊ ಅಪರಾಧ ವಿಭಾಗ ರಣತುಂಗ ಅವರನ್ನು ವಶ ಪಡಿಸಿದ್ದು, ನ್ಯಾಯಾಲಯಕ್ಕೆಹಾಜರು ಪಡಿಸಲಿದ್ದಾರೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಶ್ರೀಲಂಕಾ ಪ್ರಧಾನಿ ರನಿಲ್‌ ವಿಕ್ರಮಸಿಂಘೆ ಅವರನ್ನು ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಶುಕ್ರವಾರ ಪದಚ್ಯುತಗೊಳಿಸಿದ ನಂತರ ಬಿಕ್ಕಟ್ಟು ಉಲ್ಬಣಗೊಂಡಿದ್ದು ಭಾನುವಾರ ಹಿಂಸಾಚಾರ ಭುಗಿಲೆದ್ದಿತ್ತು.

ಅಧ್ಯಕ್ಷ ಮೈತ್ರಿಸೇನ ಅವರು ರನಿಲ್‌ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ, ಮಹಿಂದ ರಾಜಪಕ್ಸೆ ಅವರನ್ನು ನೂತನ ಪ್ರಧಾನಿಯಾಗಿ ನೇಮಕ ಮಾಡಿದ್ದರಿಂದ ಉದ್ಭವಿಸಿದ ರಾಜಕೀಯ ಬಿಕ್ಕಟ್ಟಿನ ನಂತರ ವರದಿಯಾದ ಮೊದಲ ಹಿಂಸಾಚಾರ ಪ್ರಕರಣ ಇದಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.