ಕೊಲೊಂಬೊ: ದುಬೈನಿಂದ ದೇಶಕ್ಕೆ ಮರಳಿದ 20 ವರ್ಷದಯುವಕನಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಶುಕ್ರವಾರ ಹೇಳಿದ್ದಾರೆ.
ಮಂಕಿಪಾಕ್ಸ್ ಸೋಂಕಿತ ಯುವಕ ದೇಶಕ್ಕೆ ಮಂಗಳವಾರ ಆಗಮಿಸಿದ್ದ ಎಂದುಆರೋಗ್ಯ ಸಚಿವಾಲಯದ ಸಾಂಕ್ರಾಮಿಕ ರೋಗ ಘಟಕ ಮಾಹಿತಿ ನೀಡಿರುವುದಾಗಿಕೆಹೆಲಿಯಾ ತಿಳಿಸಿದ್ದಾರೆ.
ಮಂಕಿಪಾಕ್ಸ್,ವೈರಸ್ ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಕಾಯಿಲೆಯಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ, 109 ರಾಷ್ಟ್ರಗಳಲ್ಲಿ ಈ ವರೆಗೆ73,080 ಪ್ರಕರಣಗಳು ಪತ್ತೆಯಾಗಿವೆ.ಜಾಗತಿಕವಾಗಿಈ ವರ್ಷದ ಮೊದಲ ಪ್ರಕರಣ ಮೇ ತಿಂಗಳಲ್ಲಿ ವರದಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.