ಕೊಲಂಬೊ: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆ ಇದೇ ಶನಿವಾರ ನಡೆಯಲಿದೆ. ಚುನಾವಣಾ ಪ್ರಚಾರವು ಬುಧವಾರ ಅಂತ್ಯಗೊಂಡಿದೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ. ಸುಮಾರು 13,400 ಮತಗಟ್ಟೆಗಳಲ್ಲಿ 1.7 ಕೋಟಿ ಮಂದಿ ಮತದಾನ ಮಾಡಲಿದ್ದಾರೆ.
ಹಾಲಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಕಣದಲ್ಲಿರುವ ಪ್ರಮುಖ ಅಭ್ಯರ್ಥಿ.
ಈ ಬಾರಿ ಕಣದಲ್ಲಿರುವ ಮತ್ತೊಬ್ಬ ಪ್ರಮುಖ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಪಕ್ಷದ ನಾಯಕ ಮತ್ತು ಅಧ್ಯಕ್ಷೀಯ ಅಭ್ಯರ್ಥಿ ಅರುಣ ಕುಮಾರ ಡಿಸ್ಸಾನಾಯಕೆ ಅವರು ತಾವು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಪಿಪಿಯಿಂದಾಗಿ ಶ್ರೀಲಂಕಾದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.