ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ತಿಂಗಳ 25ರಂದು ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅನಿರ್ದಿಷ್ಟ ಕಾಲ ಮುಂದೂಡಲಾಗಿದೆ.
ಈ ಸಂಬಂಧ ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಖಜಾನೆ ಇಲಾಖೆಯು ಅಗತ್ಯವಿರುವ ಹಣ ಬಿಡುಗಡೆ ಮಾಡದ ಕಾರಣ ಮಂಗಳವಾರ ಚುನಾವಣೆ ನಡೆಯುವುದಿಲ್ಲ. ಹಣ ಒದಗಿಸಿದ ನಂತರವೇ ಚುನಾವಣೆಯ ಮುಂದಿನ ದಿನಾಂಕ ಘೋಷಿಸಲಾಗುವುದು ಎಂದು ತಿಳಿಸಲಾಗಿದೆ.
ಇದಕ್ಕೂ ಮುನ್ನ ಮಾ.9ರಂದು ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ನಂತರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏ.25ಕ್ಕೆ ಮುಂದೂಡಲಾಗಿತ್ತು.
ಚುನಾವಣೆಗೆ ಸಂಬಂಧಿಸಿದಂತೆ ಕನಿಷ್ಠ ಮೂರು ಪ್ರಕರಣಗಳ ವಿಚಾರಣೆಯು ಬಾಕಿ ಉಳಿದಿದ್ದು ಮೇ ಮಧ್ಯಭಾಗದಲ್ಲಿ ವಿಚಾರಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.