ಕೊಲೊಂಬೊ: ಶ್ರೀಲಂಕಾದ ವ್ಯಾಪ್ತಿಯ ಸಮುದ್ರದಲ್ಲಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆಯು 23 ಭಾರತೀಯ ಮೀನುಗಾರನ್ನು ಬಂಧಿಸಿದ್ದು, ಎರಡು ಹಾಯಿದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಡೆಲ್ಫ್ಟ್ ದ್ವೀಪದ ಉತ್ತರ ಭಾಗದ, ಜಾಫ್ನಾ ಪ್ರದೇಶದಿಂದ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಧಿತರನ್ನು ಕಂಕೆಸಂತುರೈ ಬಂದರಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಮೈಲೇಡಿ ಫಿಶರೀಸ್ ಇನ್ಸ್‌ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.