ADVERTISEMENT

ಜಪಾನ್: 5.9 ತೀವ್ರತೆಯ ಪ್ರಬಲ ಭೂಕಂಪ

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 16:30 IST
Last Updated 3 ಜೂನ್ 2024, 16:30 IST
ಜಪಾನಿನ ಇಶಿಕಾವಾ ಪ್ರಾಂತ್ಯದ ವಾಜಿಮಾದಲ್ಲಿ ಸಂಭವಿಸಿದ ಭೂಕಂಪದಿಂದ ಹಾನಿಗೊಳಗಾದ ಮನೆಗಳು (ಎಪಿ/ಪಿಟಿಐ)
ಜಪಾನಿನ ಇಶಿಕಾವಾ ಪ್ರಾಂತ್ಯದ ವಾಜಿಮಾದಲ್ಲಿ ಸಂಭವಿಸಿದ ಭೂಕಂಪದಿಂದ ಹಾನಿಗೊಳಗಾದ ಮನೆಗಳು (ಎಪಿ/ಪಿಟಿಐ)   

ಟೋಕಿಯೊ:  ಜಪಾನ್‌ನ ಇಶಿಕಾವಾ ಪ್ರಾಂತ್ಯದಲ್ಲಿ ಸೋಮವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ.

‘ನೋಟೊ ಪರ್ಯಾಯ ದ್ವೀಪದ ಉತ್ತರ ತುದಿಯಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕೆಲವು ನಿಮಿಷಗಳ ನಂತರ, ಮತ್ತೆ 4.8 ತೀವ್ರತೆಯ ಭೂಕಂಪ ಸಂಭವಿಸಿದೆ’ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಜನವರಿ 1ರಂದು ನೋಟೊ ಪರ್ಯಾಯ ದ್ವೀಪದದಲ್ಲಿ ಸಂಭವಿಸಿದ 7.6 ತೀವ್ರತೆಯ ಭೂಕಂಪವು 241 ಜನರನ್ನು ಬಲಿ ತೆಗೆದುಕೊಂಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.