ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ಪೆಸಿಫಿಕ್ ಸಾಗರದಲ್ಲಿರುವ ವನೌತು ದ್ವೀಪ ಸಮೂಹದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಭಾನುವಾರ ಸಂಭವಿಸಿದೆ. ಇದು ಈ ಪ್ರದೇಶದಲ್ಲಿ ಸುನಾಮಿ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಅಮೆರಿಕ ಭೂವಿಜ್ಞಾನ ಸರ್ವೇಕ್ಷಣಾ ಇಲಾಖೆ ಎಚ್ಚರಿಸಿದೆ.
ವನೌತುವಿನ ಪೋರ್ಟ್ ಒರ್ಲಿ ಎಂಬಲ್ಲಿಂದ ಸುಮಾರು 23 ಕಿಲೋಮೀಟರ್ ದೂರದಲ್ಲಿ ಹಾಗೂ ಸಾಗರದ 27 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಇದೆ ಎಂದು ಇಲಾಖೆ ತಿಳಿಸಿದೆ.
ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು, ಭೂಕಂಪನ ಕೇಂದ್ರದ ಸುಮಾರು 300 ಕಿಲೋಮೀಟರ್ ವ್ಯಾಪ್ತಿಯ ಕರಾವಳಿ ಪ್ರದೇಶಗಳಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. ಯಾವುದೇ ಹಾನಿಯಾಗಿರುವ ಬಗ್ಗೆ ಈವರೆಗೆ ವರದಿಯಾಗಿಲ್ಲ.
ವನೌತುವಿನಲ್ಲಿ ಸುಮಾರು 2.8 ಲಕ್ಷ ಜನರು ವಾಸಿಸುತ್ತಿದ್ದಾರೆ. ಇಲ್ಲಿ ಭೂಕಂಪ, ಜ್ವಾಲಾಮುಖಿ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳು ನಿರಂತವಾಗಿ ಸಂಭವಿಸುತ್ತಿರುವುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.