ADVERTISEMENT

ಪಾಕಿಸ್ತಾನದ ಭದ್ರತಾ ತಪಾಸಣಾ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ; ಮೂವರ ಸಾವು

ಎಪಿ
Published 6 ಜುಲೈ 2023, 0:30 IST
Last Updated 6 ಜುಲೈ 2023, 0:30 IST
   

ಪೆಶಾವರ: ವಾಯವ್ಯ ಪಾಕಿಸ್ತಾನದ ಭದ್ರತಾ ತಪಾಸಣಾ ಕೇಂದ್ರದಲ್ಲಿ ಬುಧವಾರ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 10 ವರ್ಷದ ಬಾಲಕ ಹಾಗೂ ಇಬ್ಬರು ಸೈನಿಕರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 14 ನಾಗರಿಕರು ಮತ್ತು ಕೆಲ ಸೈನಿಕರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಅಘ್ಗಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮಿರಾನ್ ಷಾ ಎಂಬಲ್ಲಿ ಬಾಂಬ್ ದಾಳಿ ನಡೆದಿದೆ. ದಾಳಿ ನಡೆಸಿದವರಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ರಶೀದ್ ಖಾನ್ ಮಾಹಿತಿ ನೀಡಿದ್ದಾರೆ.

ದಾಳಿಯ ಕುರಿತು ಇದುವರೆಗೆ ಸೇನೆಯಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಯಾವುದೇ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ತೆಹ್ರೀಕ್–ಎ– ತಾಲಿಬಾನ್ ಪಾಕಿಸ್ತಾನ ಸಂಘಟನೆ ಮೇಲೆ ಶಂಕೆ ವ್ಯಕ್ತವಾಗಿದೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.