ಒಟ್ಟಾವ: ಕೆನಡಾದಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ. ಆದರೆ ಅವರೆಲ್ಲರೂ ಸಿಖ್ ಸಮುದಾಯಕ್ಕೆ ಸೇರಿದವರಲ್ಲ ಎಂದಿದ್ದಾರೆ.
ಒಟ್ಟಾವದಲ್ಲಿರುವ ಪಾರ್ಲಿಮೆಂಟ್ ಹಿಲ್‌ನಲ್ಲಿ ಇತ್ತೀಚೆಗೆ ನಡೆದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ.
ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಕೊಲೆ ಸಂಬಂಧ ಭಾರತ ಹಾಗೂ ಕೆನಡಾ ನಡುವಣ ರಾಜತಾಂತ್ರಿಕ ಸಂಬಂಧ ಹಳಸಿರುವ ವೇಳೆಯಲ್ಲೇ ಟ್ರುಡೊ ಹೀಗೆ ಹೇಳಿದ್ದಾರೆ.
‘ಕೆನಡಾದಲ್ಲಿ ಹಲವು ಖಾಲಿಸ್ತಾನಿ ಬೆಂಬಲಿಗರಿದ್ದಾರೆ. ಅದರೆ ಅವರೆಲ್ಲರೂ ಸಿಖ್ ಸಮುದಾಯಕ್ಕೆ ಸೇರಿದವರಲ್ಲ. ಹೀಗೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಬೆಂಬಲಿಸುವವರು ಕೆನಡಾದಲ್ಲಿ ಇದ್ದಾರೆ. ಆದರೆ ಅವರೆಲ್ಲರೂ ಹಿಂದೂಗಳಲ್ಲ’ ಎಂದು ಟ್ರುಡೊ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.