ವಾಷಿಂಗ್ಟನ್: ಒಕ್ಲಹಾಮದ ಡಂಕನ್ ಪ್ರದೇಶದ ವಾಲ್ಮಾರ್ಟ್ ಸ್ಟೋರ್ನಲ್ಲಿ ಸೋಮವಾರ ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಸ್ಟೋರ್ ಮುಂಭಾಗದಲ್ಲಿರುವ ವಾಹನ ನಿಲುಗಡೆ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಶಂಕಿತ ವ್ಯಕ್ತಿಯು ಸಹ ಮೃತಪಟ್ಟಿದ್ದಾನೆ ಎಂದು ಡಂಕನ್ ಪೊಲೀಸ್ ಮುಖ್ಯಸ್ಥ ಡ್ಯಾನಿ ಫೋರ್ಡ್ ತಿಳಿಸಿದ್ದಾರೆ ಎಂದು ಟಿಎನ್ಎನ್ ಸುದ್ದಿ ವಾಹಿನಿ ವರದಿ ಮಾಡಿದೆ.
ಈ ಪ್ರದೇಶದಲ್ಲಿ ಶಾಲೆಗಳನ್ನು ಕೆಲ ಹೊತ್ತು ಬಂದ್ ಮಾಡಲಾಗಿತ್ತು. ಪರಿಸ್ಥಿತಿ ತಿಳಿಯಾದ ನಂತರ ಶಾಲೆಗಳು ಪುನರ್ ಆರಂಭಗೊಂಡವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.