ADVERTISEMENT

ಉಗ್ರರ ದಾಳಿ: ಪಾಕಿಸ್ತಾನ ಭದ್ರತಾ ಪಡೆಯ ಮೂವರು ಸಾವು

ಪಿಟಿಐ
Published 19 ಆಗಸ್ಟ್ 2024, 14:10 IST
Last Updated 19 ಆಗಸ್ಟ್ 2024, 14:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಪೆಶಾವರ: ಅಫ್ಗಾನಿಸ್ಥಾನ ಭಾಗದಿಂದ ಭಯೋತ್ಪಾದಕರು ನಡೆಸಿದ ದಾಳಿಯಿಂದ ಪಾಕಿಸ್ತಾನ ಭದ್ರತಾ ಪಡೆಯ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಗಡಿ ಭದ್ರತಾ ಪಡೆಯ ನೆಲೆಯ ಮೇಲೆ ಸೋಮವಾರ ಬೆಳಗಿನ ಜಾವ ದಾಳಿ ನಡೆದಿದೆ. ಭಯೋತ್ಪಾದಕರು ಹಾಗೂ ಭದ್ರತಾ ಪಡೆಯವರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗಾರ್ಡೊ ಸೆಕ್ಟರ್‌ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT