ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಸಮೀಪ ಸಿಲಿಂಡರ್‌ನಿಂದ ವಿಷಾನಿಲ ಸೋರಿಕೆಯಿಂದಾಗಿ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೋಹಾನ್ಸ್‌ಬರ್ಗ್ ಪೂರ್ವ ಹೊರವಲಯದ ಬೋಕ್ಸ್‌ಬರ್ಗ್ ನಗರದಲ್ಲಿ ದುರಂತ ಸಂಭವಿಸಿದೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.
ಈ ದುರಂತದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಎಂದು ಎಮರ್ಜನ್ಸಿ ಸರ್ವಿಸ್‌ನ ಮಗದೊಂದು ವರದಿ ತಿಳಿಸಿದೆ. ಈ ಸಂಬಂಧ ಇನ್ನಷ್ಟೇ ಸ್ಪಷ್ಟ ಚಿತ್ರಣ ಲಭಿಸಬೇಕಿದೆ.
ಅನಿಲ ಸೋರಿಕೆ ನಿಂತಿದ್ದು, 100 ಮೀಟರ್ ಅಸುಪಾಸಿನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಎಮರ್ಜನ್ಸಿ ಸರ್ವಿಸ್ ವಕ್ತಾರ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಅನಿಲ ಸಿಲಿಂಡರ್ ಅನ್ನು ಗುಡಿಸಲಿನೊಳಗೆ ಅಕ್ರಮವಾಗಿ ಚಿನ್ನ ಸಂಸ್ಕರಣೆ ಮಾಡಲು ಬಳಕೆ ಮಾಡುತ್ತಿದ್ದರು. ಇದು ಯಾವ ವಿಧದ ಅನಿಲ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ಜೋಹಾನ್ಸ್‌ಬರ್ಗ್ ಸುತ್ತಮುತ್ತಲಿನಲ್ಲಿ ಅಕ್ರಮ ಚಿನ್ನದ ಗಣಿಗಾರಿಕೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.