ವಾಷಿಂಗ್ಟನ್: ಕಾಶ್ಮೀರ ವಿವಾದ ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ವಹಿಸಲು ಆಸಕ್ತಿ ತೋರಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಹೇಳಿದ್ದಾರೆ. ಓವಲ್ ಹೌಸ್‌ನಲ್ಲಿ ಇದೇ ಮೊದಲ ಬಾರಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೆ ನಡೆಸಿದ ಮಾತುಕತೆ ವೇಳೆ ಟ್ರಂಪ್ ಅವರು ತಮ್ಮ ಮನದಿಂಗಿತ ವ್ಯಕ್ತಪಡಿಸಿದ್ದಾರೆ.
‘ಉಭಯ ದೇಶಗಳು ಕೇಳಿದರೆ ನಾನು ಸಹಾಯ ಮಾಡಲು ಸಿದ್ಧ. ಮಧ್ಯಸ್ಥಿಕೆ ವಹಿಸಲು ಆಸಕ್ತಿ ಇದೆ’ ಎಂದು ಟ್ರಂಪ್ ಹೇಳಿದ್ದಾರೆ.
ಕಾಶ್ಮೀರ ವಿವಾದವು ಉಭಯ ದೇಶಗಳಿಗೆ ಸಂಬಂಧಿಸಿದ್ದು, ಇದರಲ್ಲಿ ಮೂರನೇ ವ್ಯಕ್ತಿ ಇಲ್ಲವೇ ದೇಶದ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ಭಾರತ ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದೆ.ಟ್ರಂಪ್ ಅವರ ತೀರ್ಮಾನವನ್ನು ಇಮ್ರಾನ್ ಸ್ವಾಗತಿಸಿದ್ದಾರೆ. ಕೋಟ್ಯಂತರ ಜನರ ಪ್ರಾರ್ಥನೆ ಅವರ ಜತೆಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.