ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಕುರಿತು ಮತ್ತು ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಯುರೋಪ್‌ನಲ್ಲಿ ಶಾಂತಿ ಸ್ಥಾಪನೆ, ಉಕ್ರೇನ್ ಯುದ್ಧ ಅಂತ್ಯಕ್ಕೆ ತಂತ್ರಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಉಕ್ರೇನ್‌ನಲ್ಲಿ ಯುದ್ಧವನ್ನು ಹೆಚ್ಚಿಸದಂತೆಯೂ ಪುಟಿನ್‌ಗೆ ಟ್ರಂಪ್ ಸಲಹೆ ನೀಡಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಚುನಾಯಿತರಾದ ಬಳಿಕ ಟ್ರಂಪ್ ಸುಮಾರು 70 ವಿವಿಧ ದೇಶಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.
ಟ್ರಂಪ್ ಕರೆ ಮಾಡಿದ ಮೊದಲ ಮೂರು ವಿಶ್ವ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ 2025ರ ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.