ADVERTISEMENT

ಚುನಾವಣೆಯಲ್ಲಿ ಸೋತರೆ ಮತ್ತೆ ಸ್ಪರ್ಧಿಸಲ್ಲ: ಡೊನಾಲ್ಡ್‌ ಟ್ರಂಪ್

ಏಜೆನ್ಸೀಸ್
Published 23 ಸೆಪ್ಟೆಂಬರ್ 2024, 14:02 IST
Last Updated 23 ಸೆಪ್ಟೆಂಬರ್ 2024, 14:02 IST
<div class="paragraphs"><p>ಡೊನಾಲ್ಡ್‌ ಟ್ರಂಪ್</p></div>

ಡೊನಾಲ್ಡ್‌ ಟ್ರಂಪ್

   

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಈ ಬಾರಿ ಸೋತರೆ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಹೇಳಿದ್ದಾರೆ.

ಈ ಬಗ್ಗೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದು ಸಾಧ್ಯವಿಲ್ಲ ಅನಿಸುತ್ತಿದೆ’‌ ಎಂದು ಹೇಳಿದ್ದಾರೆ.

ADVERTISEMENT

2020ರ ಚುನಾವಣೆಯಲ್ಲಿ ಜೋ ಬೈಡನ್‌ ವಿರುದ್ಧ ಸೋತ ಬಳಿಕ, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಟ್ರಂಪ್ ಆರೋಪಿಸಿದ್ದರು. ಅದೇ ವಿಚಾರವನ್ನು ಚುನಾವಣಾ ಪ್ರಚಾರದಲ್ಲಿಯೂ ಬಳಸಿಕೊಂಡಿದ್ದರು.

81 ವರ್ಷದ ಜೋ ಬೈಡನ್‌ ಅವರನ್ನು ವಯಸ್ಸಿನ ಕಾರಣಕ್ಕೆ ಟ್ರಂಪ್ ಅವರು ನಿರಂತರವಾಗಿ ಟೀಕೆ ಮಾಡುತ್ತಿದ್ದರು. ಇದರಿಂದಾಗಿ ಬೈಡನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. 2028ರ ವೇಳೆಗೆ ಟ್ರಂಪ್ ಅವರಿಗೆ 82 ವರ್ಷ ಆಗಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.