ವಿಶ್ವಸಂಸ್ಥೆ: ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದರು.
ವಿಶ್ವಸಂಸ್ಥೆಯ ಸಾಮಾನ್ಯಸಭೆಯ 78ನೇ ಅಧಿವೇಶನದ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನ ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಂಡರೆ ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿದೆ. ಜೊತೆಗೆ ಇದು ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದರು.
‘ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳಿಗೆ ನಾವು ಬೆಂಬಲ ನೀಡುತ್ತೇವೆ’ ಎಂದೂ ಹೇಳಿದರು.
‘ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಮಹತ್ವದ ಪಾತ್ರ ವಹಿಸಿದೆ ಎಂಬುದು ಹೆಮ್ಮೆಯ ವಿಚಾರ. ಈಗಿರುವ ಐದು ಕಾಯಂ ಸದಸ್ಯ ರಾಷ್ಟ್ರಗಳು ಅಷ್ಟೇ ಅಲ್ಲದೆ, 15 ತಾತ್ಕಾಲಿಕ ಸದಸ್ಯ ರಾಷ್ಟ್ರಗಳನ್ನು ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರಗಳನ್ನಾಗಿ ಮಾಡುವುದಕ್ಕೆ ನಮ್ಮ ಬೆಂಬಲವಿದೆ’ ಎಂದೂ ಹೇಳಿದರು.
‘ಅವೆಲ್ಲವೂ (5+15) ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರಗಳಾಗಬೇಕು. ಜಗತ್ತು ದೊಡ್ಡದಿದೆ. ಕೇವಲ ಐದು ರಾಷ್ಟ್ರಗಳು (ಅಮೆರಿಕ, ಬ್ರಿಟನ್, ಫ್ರಾನ್ಸ್, ಚೀನಾ ಮತ್ತು ರಷ್ಯಾ) ಮಾತ್ರ ಕಾಯಂ ಸದಸ್ಯತ್ವ ಪಡೆಯುವುದು ಸರಿಯಲ್ಲ’ ಎಂದು ಒತ್ತಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.