ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನೆಲಬಾಂಬ್ ಸಿಡಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಾಯಗೊಂಡಿದ್ದಾನೆ.
ತಿರಾಹ್ ಕಣಿವೆ ಪ್ರದೇಶದಲ್ಲಿ ಬಾಲಕರು ಹಣಬೆಯ ಹುಡುಕಾಟದಲ್ಲಿ ತೊಡಗಿದ್ದರು. ಬಾಲಕನೊಬ್ಬ ಹುದುಗಿಸಿಟ್ಟಿದ್ದ ನೆಲಬಾಂಬ್ ಅನ್ನು ಆಕಸ್ಮಿಕವಾಗಿ ತುಳಿದಾಗ ಸಿಡಿದಿದೆ. ತೀವ್ರ ಗಾಯಗೊಂಡ ಒಬ್ಬ ಬಾಲಕ ಸ್ಥಳದಲ್ಲಿ ಹಾಗೂ ಮತ್ತೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟನು ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆ ನಡೆದಿದೆ ಎಂದು ತಿಳಿಸಿದ್ದಾರೆ. ಅಫ್ಗಾನಿಸ್ತಾನ ಗಡಿಯ ಈ ಪ್ರದೇಶ ಸೂಕ್ಷ್ಮ ಪ್ರದೇಶವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.