ADVERTISEMENT

ಉಗಾಂಡ | ಇಂಧನ ಟ್ಯಾಂಕರ್ ಸ್ಫೋಟ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

ಪಿಟಿಐ
Published 27 ಅಕ್ಟೋಬರ್ 2024, 13:06 IST
Last Updated 27 ಅಕ್ಟೋಬರ್ 2024, 13:06 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

(ಐಸ್ಟೋಕ್ ಚಿತ್ರ)

ಕಂಪಾಲಾ: ಉಗಾಂಡದ ಕಂಪಾಲಾದಲ್ಲಿ ಸಂಭವಿಸಿದ ಇಂಧನ ಟ್ಯಾಂಕರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿದೆ ಎಂದು ಸರ್ಕಾರ ತಿಳಿಸಿದೆ.

ADVERTISEMENT

ಉತ್ತರ ಕಂಪಾಲಾದ ಕಿಗೊಗ್ವಾ ಪಟ್ಟಣದಲ್ಲಿ ಕಳೆದ ವಾರ ಉರುಳಿಬಿದ್ದ ಇಂಧನ ಟ್ಯಾಂಕರ್‌ನಿಂದ ಪೆಟ್ರೋಲ್‌ ಸಂಗ್ರಹಿಸಲು ಸ್ಥಳೀಯರು ತೆರಳಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಹಲವಾರು ಮಂದಿ ಗಾಯಗೊಂಡಿದ್ದರು.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೃತಪಟ್ಟವರು ಸಂಪೂರ್ಣ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಡಿಎನ್‌ಎ ಪರೀಕ್ಷೆ ಮೂಲಕ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಉತ್ತರ ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 170ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.