ADVERTISEMENT

ಅಮೆರಿಕ ಅಧ್ಯಕ್ಷ ಬೈಡನ್ ಜತೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಮಾತುಕತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಸೆಪ್ಟೆಂಬರ್ 2024, 3:15 IST
Last Updated 26 ಸೆಪ್ಟೆಂಬರ್ 2024, 3:15 IST
<div class="paragraphs"><p>ವೊಲೊಡಿಮಿರ್ ಝೆಲೆನ್‌ಸ್ಕಿ, ಜೋ ಬೈಡನ್</p></div>

ವೊಲೊಡಿಮಿರ್ ಝೆಲೆನ್‌ಸ್ಕಿ, ಜೋ ಬೈಡನ್

   

(ರಾಯಿಟರ್ಸ್ ಸಂಗ್ರಹ ಚಿತ್ರ)

ನ್ಯೂಯಾರ್ಕ್: ವಿಶ್ವಸಂಸ್ಥೆಯ ಮಹಾ ಅಧಿವೇಶನದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಝೆಲೆನ್‌ಸ್ಕಿ, ರಷ್ಯಾ ವಿರುದ್ಧದ ಸಂಘರ್ಷದಲ್ಲಿ ಅಮೆರಿಕ ನೀಡಿರುವ ಅಚಲ ಬೆಂಬಲಕ್ಕಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

'ಅಮೆರಿಕದ ನೆರವಿನಿಂದಾಗಿ ಉಕ್ರೇನ್‌ಗೆ ತನ್ನ ಸ್ವಾತಂತ್ರ್ಯ ಉಳಿಸಿಕೊಳ್ಳಲು ಹಾಗೂ ಜೀವಗಳನ್ನು ರಕ್ಷಿಸಲು ನೆರವಾಗಿದೆ' ಎಂದು ಅವರು ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿ ಹಾಗೂ 'ವಿಜಯದ ಯೋಜನೆ' ಕುರಿತು ಬೈಡನ್ ಅವರಿಗೆ ಝೆಲೆನ್‌ಸ್ಕಿ ಮಾಹಿತಿ ನೀಡಿದ್ದಾರೆ. ಈ ಕುರಿತು ವಾಷಿಂಗ್ಟನ್‌ನಲ್ಲಿ ನಡೆಯಲಿರುವ ಮಾತುಕತೆಯಲ್ಲಿ ವಿವರವಾಗಿ ಚರ್ಚಿಸುವುದಾಗಿ ತಿಳಿಸಿದ್ದಾರೆ.

'ನಾವೆಲ್ಲರೂ ಒಟ್ಟಾಗಿ ಉಕ್ರೇನ್ ಪುನಃ ನಿರ್ಮಾಣದ ವಿಶೇಷ ಜಿ7+ ಸಭೆಯಲ್ಲಿ ಭಾಗವಹಿಸಿದ್ದೇವೆ. 30ಕ್ಕೂ ಹೆಚ್ಚು ದೇಶಗಳು ಹಾಗೂ ಯುರೋಪ್ ಒಕ್ಕೂಟ ಯುದ್ಧಾನಂತರದ ಉಕ್ರೇನ್ ನೆರವಿಗಾಗಿ ಸಹಿ ಹಾಕಿವೆ' ಎಂದು ಅವರು ತಿಳಿಸಿದ್ದಾರೆ.

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೂ ಮಾತುಕತೆ ನಡೆಸಿರುವ ವೊಲೊಡಿಮಿರ್ ಝೆಲೆನ್‌ಸ್ಕಿ, ಬೆಂಬಲಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.

ನಾವು ಉಕ್ರೇನ್ ಅನ್ನು ಬಲಪಡಿಸುವುದು, ಭದ್ರತಾ ಸ್ಥಿತಿ, ದ್ವಿಪಕ್ಷೀಯ ಭದ್ರತಾ ಒಪ್ಪಂದ ಅನುಷ್ಠಾನ ಮತ್ತು ಎರಡನೇ ಶಾಂತಿ ಶೃಂಗದ ಸಿದ್ಧತೆಗಳ ಕುರಿತು ಚರ್ಚಿಸಿರುವುದಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.