ಕೀವ್: ಉಕ್ರೇನ್ ಮೇಲೆ ಶನಿವಾರ ಮುಂಜಾನೆ ಕ್ಷಿಪಣಿ ದಾಳಿಯನ್ನು ರಷ್ಯಾ ತೀವ್ರಗೊಳಿಸಿದೆ. ಭೀಕರ ಹೈಪರ್‌ಸಾನಿಕ್ ಕ್ಷಿಪಣಿ ಮೂಲಕವೂ ದಾಳಿ ನಡೆಸಿದೆ ಎಂದು ಉಕ್ರೇನ್ ವಾಯುಪಡೆ ತಿಳಿಸಿದೆ.
ಕನಿಷ್ಠ ಐದು ಪ್ರದೇಶಗಳಲ್ಲಿ ರಷ್ಯಾದ ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
‘ರಷ್ಯಾ ದಾಳಿ ಪರಿಣಾಮ ಹಲವು ಮನೆಗಳು, ಕಟ್ಟಡಗಳು ಹಾನಿಗೊಳಗಾಗಿವೆ. ಕಟ್ಟಡವೊಂದು ಭಾಗಶಃ ಧ್ವಂಸವಾಗಿದೆ. ಇದರಿಂದ ನಾಯಿಯೊಂದು ಮೃತಪಟ್ಟಿದೆ. ಜನರಿಗೆ ಯಾವುದೇ ಹಾನಿಯಾಗಿಲ್ಲ’ ಎಂದು ಉಕ್ರೇನ್ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.