ವಿಶ್ವಸಂಸ್ಥೆ:ಪ್ರಧಾನಿ ನರೇಂದ್ರ ಮೋದಿ ಅವರುರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜತೆಗೆ ಉಕ್ರೇನ್ ಬಿಕ್ಕಟ್ಟು ಕುರಿತ ಮಾತುಕತೆ ವೇಳೆ ‘ಇದು ಯುದ್ಧಕಾಲವಲ್ಲ’ವೆಂದು ನೀಡಿದ ಕಿವಿಮಾತಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಹೇಳಿದ್ದಾರೆ.
ಭಾರತಕ್ಕೆ ಮೂರು ದಿನಗಳ ಭೇಟಿ ಕೈಗೊಂಡಿರುವ ಅವರು,ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಅಂತರರಾಷ್ಟ್ರೀಯ ಕಾನೂನುಗಳಿಗೆ ಅನುಗುಣವಾಗಿ ಉಕ್ರೇನ್ ಬಿಕ್ಕಟ್ಟಿಗೆ ಪರಿಹಾರ ಒದಗಿಸುವ ಸಂದರ್ಭ ಸೃಷ್ಟಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸುವುದಾಗಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.