ವಿಶ್ವಸಂಸ್ಥೆ: ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾ ಮುಸ್ಲಿಮರು ಮತ್ತು ಇತರೆ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ಖಂಡಿಸಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ನಿರ್ಣಯ ಮಂಡಿಸಿದೆ.
ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರಕ್ಕೆ ಕಡಿವಾಣ ಹಾಕಲು ಮ್ಯಾನ್ಮಾರ್ ಸರ್ಕಾರ ತಕ್ಷಣದಲ್ಲೇ ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ. ಈ ನಿರ್ಣಯಕ್ಕೆ ಮ್ಯಾನ್ಮಾರ್‌ನ ವಿಶ್ವಸಂಸ್ಥೆ ರಾಯಭಾರಿ ಹೌ ಡು ಶುಆನ್ ವಿರೋಧ ವ್ಯಕ್ತಪಡಿಸಿದರು.
‘ನಿರ್ಣಯವು ಇಬ್ಬಂದಿ ನಿಲುವಿಗೆಉದಾಹರಣೆಯಾಗಿದ್ದು, ಮ್ಯಾನ್ಮಾರ್ ಮೇಲೆ ಉದ್ದೇಶಪೂರ್ವಕವಾಗಿ ರಾಜಕೀಯ ಒತ್ತಡ ತರುವ ಕ್ರಮವಾಗಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.