ADVERTISEMENT

Israel attack: ಇರಾನ್ ಮನವಿ ಮೇರೆಗೆ ತುರ್ತು ಸಭೆ ಕರೆದ ವಿಶ್ವಸಂಸ್ಥೆಯ ಮಂಡಳಿ

ರಾಯಿಟರ್ಸ್
Published 28 ಅಕ್ಟೋಬರ್ 2024, 6:46 IST
Last Updated 28 ಅಕ್ಟೋಬರ್ 2024, 6:46 IST
<div class="paragraphs"><p>ವಿಶ್ವಸಂಸ್ಥೆ</p></div>

ವಿಶ್ವಸಂಸ್ಥೆ

   

ರಾಯಿಟರ್ಸ್ ಚಿತ್ರ

ವಿಶ್ವಸಂಸ್ಥೆ: ತನ್ನ ವಿರುದ್ಧ ಇಸ್ರೇಲ್‌ ನಡೆಸಿದ ದಾಳಿ ಸಂಬಂಧ ತುರ್ತು ಸಭೆ ನಡೆಸುವಂತೆ ಇರಾನ್‌ ಮಾಡಿದ್ದ ಮನವಿಯ ಅನುಸಾರ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು (ಸೋಮವಾರ) ಮಧ್ಯಾಹ್ನ ಸಭೆ ಕರೆದಿದೆ.

ADVERTISEMENT

ಯುಎನ್‌ಎಸ್‌ಸಿ ಅಧ್ಯಕ್ಷತೆ ವಹಿಸಿಕೊಂಡಿರುವ ಸ್ವಿಟ್ಜರ್‌ಲ್ಯಾಂಡ್‌, ತುರ್ತು ಸಭೆ ಆಯೋಜನೆ ಬಗ್ಗೆ ಭಾನುವಾರ ಹೇಳಿಕೆ ನೀಡಿದೆ. ಇರಾನ್‌ ಮನವಿಯನ್ನು ರಷ್ಯಾ, ಚೀನಾ ಮತ್ತು ಅಲ್ಜೀರಿಯಾ ಬೆಂಬಲಿಸಿವೆ ಎಂದು ತಿಳಿಸಿದೆ.

ಇದೇ ತಿಂಗಳ ಆರಂಭದಲ್ಲಿ ಇಸ್ರೇಲ್‌ ವಿರುದ್ಧ ಇರಾನ್‌ ಕ್ಷಿಪಣಿ ದಾಳಿ ನಡೆಸಿತ್ತು. ಇರಾನ್‌ ಬೆಂಬಲಿತ ಹಿಜ್ಬುಲ್ಲಾ ನಾಯಕರನ್ನು ಲೆಬನಾನ್‌ನಲ್ಲಿ ಹತ್ಯೆ ಮಾಡಿದ ಬಳಿಕ ಈ ದಾಳಿ ಸಂಘಟಿಸಲಾಗಿತ್ತು. ಇದು ಕಳೆದ ಆರು ತಿಂಗಳಲ್ಲಿ, ಇಸ್ರೇಲ್‌ ಮೇಲೆ ಇರಾನ್‌ ನಡೆಸಿದ ಎರಡನೇ ನೇರ ದಾಳಿಯಾಗಿತ್ತು.

ಇದಕ್ಕೆ ಪ್ರತಿಯಾಗಿ ಇರಾನ್‌ನ ಸೇನಾ ನೆಲೆಯನ್ನು ಗುರಿಯಾಗಿಸಿ ಇಸ್ರೇಲ್‌ ಸೇನೆ ಶನಿವಾರ ನಡೆಸಿದ ದಾಳಿಯಲ್ಲಿ ಕನಿಷ್ಠ ಇಬ್ಬರು ಯೋಧರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.