ವಾಷಿಂಗ್ಟನ್: ಎಚ್–1ಬಿ ವೀಸಾಗಾಗಿ ಮತ್ತೆ ಅರ್ಜಿಯನ್ನು ಸಲ್ಲಿಸಲು ಅಮೆರಿಕದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಿದೇಶಗಳ ನೌಕರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಫೆಡರಲ್ ಏಜೆನ್ಸಿ ತಿಳಿಸಿದೆ.
ಈ ಮೊದಲು ನೋಂದಣಿ ಹಂತದಲ್ಲಿಯೇ ಅರ್ಜಿ ತಿರಸ್ಕರಿಸಿದ್ದಲ್ಲಿ ಅಂತಹವರು ಈಗ ಮರು ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ಐ.ಟಿ ವೃತ್ತಿಪರರಿಂದ ಎಚ್–1ಬಿ ವೀಸಾಗೆ ಹೆಚ್ಚಿನ ಬೇಡಿಕೆ ಇದೆ.
ಅಮೆರಿಕದ ಪೌರತ್ವ ಮತ್ತು ವಲಸೆ ಸೇವೆ ಇಲಾಖೆಯ (ಯುಎಸ್‌ಸಿಐಎಸ್) ಪ್ರಕಾರ, ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಥವಾ ಅಕ್ಟೋಬರ್ 1, 2020ರ ನಂತರ ಸಲ್ಲಿಸಿದ್ದ ಸಂದರ್ಭಗಳಲ್ಲಿ ಅರ್ಜಿದಾರರಿಗೆ ಈಗ ಮರು ಅರ್ಜಿ ಸಲ್ಲಿಸಲು ಅವಕಾಶವಿದೆ.
ಅಮೆರಿಕದ ಕಂಪನಿಗಳು ವಿದೇಶಿ ನೌಕರರನ್ನು ಮುಖ್ಯವಾಗಿ ಪ್ರಾಯೋಗಿಕ ಮತ್ತು ತಾಂತ್ರಿಕ ಪರಿಣತ ಕ್ಷೇತ್ರಗಳಲ್ಲಿ ನೇಮಕ ಮಾಡಿಕೊಳ್ಳಲು ಎಚ್–1ಬಿ ವೀಸಾ ಅಗತ್ಯವಾಗಿದೆ. ತಂತ್ರಜ್ಞಾನ ಕಂಪನಿಗಳು ಪ್ರತಿ ವರ್ಷವೂ ಭಾರತ ಮತ್ತು ಚೀನಾದಿಂದ ಸಾವಿರಾರು ನೌಕರರನ್ನು ನೇಮಕ ಮಾಡಿಕೊಳ್ಳುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.