ADVERTISEMENT

ನಿರ್ಬಂಧ ಸಡಿಲಿಕೆ: ಭಾರತಕ್ಕೆ ಪ್ರಯಾಣಿಸಲು ಅಮೆರಿಕನ್ನರಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 4:41 IST
Last Updated 20 ಜುಲೈ 2021, 4:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಾಷಿಂಗ್ಟನ್‌: ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣಕ್ಕೆ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಇದೀಗ ಅಮೆರಿಕ ಸಡಿಲಗೊಳಿಸಿದೆ.

ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವ ಪ್ರಯಾಣಿಕರಿಗಾಗಿ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.
ಪ್ರಯಾಣಿಕರ ಸುರಕ್ಷತಾ ನಿರ್ಬಂಧಗಳನ್ನು ನಾಲ್ಕನೇ ಹಂತದಿಂದ ಮೂರನೇ ಹಂತಕ್ಕೆ ಇಳಿಸಲಾಗಿದೆ.

ಸೋಮವಾರ ನಡೆದ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳಲ್ಲಿನ ಕೋವಿಡ್‌ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಬಂದಗಳನ್ನು ಸಡಿಲಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ, ಭಾರತಕ್ಕೆ ಕೋವಿಡ್‌ ಸಂಕಷ್ಟದ ಸಮಯದಲ್ಲಿ ಕೋವಿಡ್‌ ಲಸಿಕೆ ಸೇರಿದಂತೆ ವೈದ್ಯಕೀಯ ಪರಿಕರಗಳನ್ನು ನೆರವು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.