ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಟ್ರಂಪ್ ಬೆಂಬಲಿಗರು ನಡೆಸಿದ ಕ್ಯಾಪಿಟಲ್ ಹಿಲ್ಸ್ ಮೇಲಿನ ದಾಳಿಯನ್ನು ಖಂಡಿಸಿರುವ ರಾಜತಾಂತ್ರಿಕರು, ಟ್ರಂಪ್ ಅವರನ್ನು ಅಧಿಕಾರದಿಂದ ತೆಗೆದು ಹಾಕಲು ಕಾಯ್ದೆಯ 25 ನೇ ತಿದ್ದುಪಡಿಯನ್ನು ಬೆಂಬಲಿಸುವಂತೆ ಆಡಳಿತಾಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಕಳೆದ ಬುಧವಾರ ಕ್ಯಾಪಿಟಲ್ ಹಿಲ್ಸ್ ಮೇಲೆ ನಡೆದ ದಾಳಿ, ವಿದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಅಮೆರಿಕದ ವಿಶ್ವಾಸಾರ್ಹತೆಯನ್ನು ಕೆಟ್ಟದಾಗಿ ಬಿಂಬಿಸುತ್ತದೆ ಎಂದು ವಿದೇಶಾಂಗ ಮತ್ತು ನಾಗರಿಕ ಸೇವಾ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
‘ಅಧ್ಯಕ್ಷರ ಈ ನಡೆಯನ್ನು ನಿಯಂತ್ರಿಸುವಲ್ಲಿ ವಿಫಲವಾದರೆ, ವಿದೇಶಗಳಲ್ಲಿ ನಮ್ಮ ಪ್ರಜಾಪ್ರಭುತ್ವ ವಿದೇಶಾಂಗ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಮ್ಮ ಸಾಮರ್ಥ್ಯಕ್ಕೆ ಹಾನಿಯಾಗುತ್ತದೆ‘ಎಂದು ಖಂಡನೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.