ADVERTISEMENT

ಅಮೆರಿಕ: ಟ್ರಂಪ್ ಸಮಾವೇಶ ಸ್ಥಳದಲ್ಲಿ AK-47 ರೈಫಲ್ ಹಿಡಿದಿದ್ದ ಮುಸುಕುಧಾರಿಯ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜುಲೈ 2024, 3:42 IST
Last Updated 17 ಜುಲೈ 2024, 3:42 IST
<div class="paragraphs"><p>ರಿಪಬ್ಲಿಕನ್‌ ಪಕ್ಷದ ರಾಷ್ಟ್ರೀಯ ಸಮಾವೇಶ ಸ್ಥಳದಲ್ಲಿ ಡೊನಾಲ್ಡ್‌ ಟ್ರಂಪ್‌</p></div>

ರಿಪಬ್ಲಿಕನ್‌ ಪಕ್ಷದ ರಾಷ್ಟ್ರೀಯ ಸಮಾವೇಶ ಸ್ಥಳದಲ್ಲಿ ಡೊನಾಲ್ಡ್‌ ಟ್ರಂಪ್‌

   

ರಾಯಿಟರ್ಸ್‌ ಚಿತ್ರ

ವಾಷಿಂಗ್ಟನ್‌: ರಿಪಬ್ಲಿಕನ್‌ ಪಕ್ಷದ ರಾಷ್ಟ್ರೀಯ ಸಮಾವೇಶ ನಡೆಯುತ್ತಿದ್ದ ಸ್ಥಳದಲ್ಲಿ ಎಕೆ–47 ರೈಫಲ್‌ ಹಿಡಿದಿದ್ದ ಮುಸುಕುಧಾರಿಯೊಬ್ಬನನ್ನು ಮಿಲ್ವಾಕೀಯಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು 'Fox News' ವರದಿ ಮಾಡಿದೆ.

ADVERTISEMENT

ಸಮಾವೇಶದ ಬಳಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ, ವ್ಯಕ್ತಿಯು ಅನುಮಾನಾಸ್ಪದವಾಗಿ ಓಡಾಡುತ್ತಿದ್ದದ್ದನ್ನು ಗಮನಿಸಿ ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆ.

ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಯಾಗಿರುವ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಕಳೆದ ವಾರ ಕೊಲೆ ಯತ್ನ ನಡೆದಿತ್ತು. ಇದರ ಬೆನ್ನಲ್ಲೇ ಈ ಪ್ರಕರಣ ವರದಿಯಾಗಿದೆ.

ಪೆನ್ಸಿಲ್ವೇನಿಯಾದಲ್ಲಿ ಶನಿವಾರ (ಜುಲೈ 13ರ) ಸಂಜೆ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಿದ್ದ ಟ್ರಂಪ್‌ ಅವರ ಮೇಲೆ 20 ವರ್ಷದ ಥಾಮಸ್‌ ಮ್ಯಾಥ್ಯೂ ಕ್ರೂಕ್‌ ಎಂಬಾತ ಗುಂಡು ಹಾರಿಸಿದ್ದ. ಈ ವೇಳೆ ಟ್ರಂಪ್‌ ಅವರ ಬಲ ಕಿವಿಗೆ ಗಾಯವಾಗಿತ್ತು. ಘಟನೆಯಲ್ಲಿ ಪ್ರೇಕ್ಷಕರೊಬ್ಬರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ದಾಳಿ ನಂತರವೂ ಟ್ರಂಪ್‌ ಅವರು, ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.