ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ಚಿತ್ರಣವನ್ನೇ ಬದಲಿಸಬಲ್ಲ ಪ್ರಮುಖ ಏಳೂ ರಾಜ್ಯಗಳಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಯಶಸ್ಸು ಸಾಧಿಸಿದ್ದಾರೆ.
'ಬ್ಯಾಟಲ್‌ಗ್ರೌಂಡ್ ರಾಜ್ಯ'ಗಳು ಎನಿಸಿರುವ ರಾಜ್ಯಗಳ ಪೈಕಿ ಉತ್ತರ ಕೆರೊಲಿನಾದಲ್ಲಿ ಗೆಲುವು ಸಾಧಿಸಿರುವ ಟ್ರಂಪ್, ಪೆನ್ಸಿಲ್ವೇನಿಯಾ, ಅರಿಜೋನಾ, ಜಾರ್ಜಿಯಾ, ಮಿಷಿಗನ್, ವಿಸ್ಕಾನ್‌ಸ್ಕಿನ್ ಮತ್ತು ನೆವಾಡದಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.
ಈ ರಾಜ್ಯಗಳು ಇಬ್ಬರ ಪಾಲಿಗೂ ನಿರ್ಣಾಯಕವಾಗಲಿವೆ.
ಅಮೆರಿಕದ 50 ರಾಜ್ಯಗಳಲ್ಲಿ ಈ ಏಳು ರಾಜ್ಯಗಳ ಮತದಾರರನ್ನು ಹೊರತುಪಡಿಸಿ ಹೆಚ್ಚಿನ ರಾಜ್ಯಗಳ ಮತದಾರರು ಹಿಂದಿನ ಚುನಾವಣೆಗಳಲ್ಲಿ ಒಂದೇ ಪಕ್ಷಕ್ಕೆ ಮತ ಹಾಕುತ್ತಾ ಬಂದಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ, ಟ್ರಂಪ್ ಅವರು ಕಮಲಾ ಎದುರು 247–210ರ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.