ಇಸ್ಲಾಮಾಬಾದ್: ಇದೇ 25ರಂದು ಪಾಕಿಸ್ತಾನದಲ್ಲಿನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್–ಎ–ತಯಬಾ (ಎಲ್‌ಇಟಿ) ಜತೆ ನಂಟಿರುವ ವ್ಯಕ್ತಿಗಳು ಸ್ಪರ್ಧಿಸಿರುವ ಸಾಧ್ಯತೆ ಇದೆ ಎಂದು ಅಮೆರಿಕ ತೀವ್ರ ಕಳವಳ ವ್ಯಕ್ತಪಡಿಸಿರುವುದಾಗಿ ‘ಡಾನ್’ ವರದಿ ಮಾಡಿದೆ.
ಅಮೆರಿಕ ಈಗಾಗಲೇ ಈ ವಿಚಾರವನ್ನು ಪಾಕಿಸ್ತಾನಕ್ಕೆ ತಿಳಿಸಿದೆ. ಚುನಾವಣೆ ವೇಳೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಐರೋಪ್ಯ ಒಕ್ಕೂಟವು ಸಲಹೆ ನೀಡಿದೆ ಎಂದು ವರದಿ ತಿಳಿಸಿದೆ.
ಎಲ್‌ಇಟಿ ಜತೆ ಸಂಪರ್ಕ ಹೊಂದಿದೆ ಎಂಬ ಕಾರಣಕ್ಕೆ ಮಿಲ್ಲಿ ಮುಸ್ಲಿಂ ಲೀಗ್ (ಎಂಎಂಎಲ್) ನೋಂದಣಿಯನ್ನು ಪಾಕಿಸ್ತಾನ ಚುನಾವಣಾ ಆಯೋಗ ತಿರಸ್ಕರಿಸಿತ್ತು ಎಂಬುದನ್ನೂ ವರದಿ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.