ವಾಷಿಂಗ್ಟನ್: ಬಂದೂಕುಗಳನ್ನು ಖರೀದಿಸುವುದಕ್ಕೆ ಸಂಬಂಧಿಸಿದ ವಯೋಮಿತಿಯನ್ನು ಹೆಚ್ಚಿಸುವ ಮಸೂದೆಯನ್ನು ಅಮೆರಿಕ ಸಂಸತ್ ಸಿದ್ಧಪಡಿಸಿದೆ.
ಕೆಲ ಸೆಮಿ–ಆಟೊಮ್ಯಾಟಿಕ್ ಬಂದೂಕುಗಳನ್ನು ಖರೀದಿಸಲು ಇರುವ ವಯೋಮಿತಿಯನ್ನು 18 ರಿಂದ 25ಕ್ಕೆ ಹೆಚ್ಚಳ ಮಾಡುವ ಪ್ರಸ್ತಾವವನ್ನು ಈ ಮಸೂದೆ ಒಳಗೊಂಡಿದೆ.
ನ್ಯಾಯಾಂಗಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿಯು ಈ ಕುರಿತು ಅಹವಾಲುಗಳನ್ನು ಆಲಿಸುವ ಪ್ರಕ್ರಿಯೆ ಆರಂಭಿಸಿದ್ದು, ಮಸೂದೆಯನ್ನು ಮುಂದಿನ ವಾರ ಸಂಸತ್‌ನಲ್ಲಿ ಮಂಡಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ದೇಶದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಸಾಮೂಹಿಕ ಹತ್ಯೆ ಮಾಡಿದ ಘಟನೆಗಳು ವರದಿಯಾಗಿವೆ. ಟೆಕ್ಸಾಸ್ ಹಾಗೂ ನ್ಯೂಯಾರ್ಕ್‌ನಲ್ಲಿ ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ 19 ಮಕ್ಕಳು ಸೇರಿದಂತೆ 31 ಜನರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ಮಸೂದೆಗೆ ಮಹತ್ವ ಬಂದಿದೆ.
ಭಾರಿ ಸಾಮರ್ಥ್ಯದ ಮ್ಯಾಗಜಿನ್‌ಗಳ ಆಮದು, ತಯಾರಿಸುವುದು ಅಥವಾ ಸಂಗ್ರಹಿಸಿ ಇಟ್ಟುಕೊಳ್ಳುವುದನ್ನು ಅಪರಾಧ ಎಂಬುದಾಗಿ ಪರಿಗಣಿಸಲಾಗುತ್ತದೆ. ಒಂದು ವೇಳೆ ಇಂಥ ಮ್ಯಾಗಜಿನ್‌ಗಳು ಪತ್ತೆಯಾದಲ್ಲಿ, ಅವುಗಳನ್ನು ಸರ್ಕಾರ ವಶಪಡಿಸಿಕೊಳ್ಳುತ್ತದೆ ಎಂಬುದು ಸೇರಿದಂತೆ ಹಲವಾರು ಅಂಶಗಳನ್ನು ಈ ಮಸೂದೆ ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.