ವಾಷಿಂಗ್ಟನ್: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡಿರುವ ಕಾಳ್ಗಿಚ್ಚು ಸುಮಾರು 3.6 ಲಕ್ಷ ಎಕರೆಗೂ ಹೆಚ್ಚು ಪ್ರದೇಶಕ್ಕೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಚಿಕೊದಲ್ಲಿ ಬುಧವಾರ ಕಾಣಿಸಿಕೊಂಡ ಬೆಂಕಿ, ಭಾನುವಾರದ ವೇಳೆಗೆ ನಾಲ್ಕು ಕೌಂಟಿಗಳಿಗೆ ಆವರಿಸಿದೆ ಎಂದು ಕ್ಯಾಲಿಫೋರ್ನಿಯಾದ ಅರಣ್ಯ ಮತ್ತು ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ.
ಅಗ್ನಿಶಾಮಕ ದಳ ಹಾಗೂ ಇತರ ಇಲಾಖೆಗಳ ಸುಮಾರು 4,000 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಕನಿಷ್ಠ 67 ಸಂಕೀರ್ಣಗಳಿಗೆ ಹಾನಿಯಾಗಿದೆ. ಸುಮಾರು 4,000 ಕಟ್ಟಡಗಳಿಗೆ ಹಾನಿಯಾಗುವ ಭೀತಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಟ್ಟೇ ಹಾಗೂ ತೆಹಾಮಾ ಕೌಂಟಿಗಳ ಸುಮಾರು 8 ಸಾವಿರ ಜನರಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.