ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶವನ್ನು ಅಂಗೀಕರಿಸುತ್ತೇನೆ ಎಂದು ಹೇಳಿರುವ ಅಧ್ಯಕ್ಷ ಜೋ ಬೈಡನ್, ಮುಂದಿನ ವರ್ಷ ಜನವರಿಯಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಫಲಿತಾಂಶವನ್ನು ಅಂಗೀಕರಿಸುವಂತೆ ತಮ್ಮ ಬೆಂಬಲಿಗರಿಗೂ ಬೈಡನ್ ಮನವಿ ಮಾಡಿದ್ದಾರೆ.
'ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಾನು ಸಂಭಾಷಣೆ ನಡೆಸಿದ್ದು, ಅಭಿನಂದನೆ ಸಲ್ಲಿಸಿದ್ದೇನೆ. ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಖಚಿತಪಡಿಸಿಕೊಳ್ಳಲು ನನ್ನ ಆಡಳಿತಕ್ಕೆ ನಿರ್ದೇಶನ ನೀಡಿರುವುದಾಗಿ ಟ್ರಂಪ್ ಅವರಿಗೆ ಭರವಸೆ ಕೊಟ್ಟಿದ್ದೇನೆ' ಎಂದು ಅವರು ತಿಳಿಸಿದ್ದಾರೆ.
2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲಿನ ಬಳಿಕ ಎಲೆಕ್ಟೋರಲ್ ವ್ಯವಸ್ಥೆ ಬಗ್ಗೆ ಡೊನಾಲ್ಡ್ ಟ್ರಂಪ್ ಪ್ರಶ್ನೆಗಳನ್ನು ಎತ್ತಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಅವರು, 'ದೇಶದ ಆಯ್ಕೆಯನ್ನು ನಾನು ಅಂಗೀಕರಿಸುತ್ತೇನೆ. ನಾನು ನನ್ನ ಕರ್ತವ್ಯವನ್ನು ನಿರ್ವಹಿಸಲಿದ್ದೇನೆ. ದೇಶದ ಸಂವಿಧಾನವನ್ನು ಗೌರವಿಸುತ್ತೇನೆ. ಜನವರಿ 20ರಂದು ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ನಡೆಯುವುದನ್ನು ಖಚಿತಪಡಿಸುತ್ತೇನೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.