ADVERTISEMENT

Wayanad Landslides|ಕಷ್ಟದ ಸಮಯದಲ್ಲಿ ನಾವು ಭಾರತೀಯರ ಜತೆಯಲ್ಲಿರುತ್ತೇವೆ: ಬೈಡನ್

ಪಿಟಿಐ
Published 2 ಆಗಸ್ಟ್ 2024, 4:11 IST
Last Updated 2 ಆಗಸ್ಟ್ 2024, 4:11 IST
ಜೋ ಬೈಡನ್
ಜೋ ಬೈಡನ್   

ವಾಷಿಂಗ್ಟನ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ.

‘ಜಿಲ್‌ ಬೈಡನ್ ಮತ್ತು ನಾನು ಕೇರಳದಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ (ಭೂಕುಸಿತ) ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ’ ಎಂದು ಜೋ ಬೈಡನ್‌ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸೇನಾ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯ ಧೈರ್ಯವನ್ನು ನಾವು ಪ್ರಶಂಸಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಭಾರತೀಯರ ಜತೆಯಲ್ಲಿರುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ದುರಂತದಲ್ಲಿ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನೂರಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.