ವಾಷಿಂಗ್ಟನ್: ಪಾಕಿಸ್ತಾನವು ತಾಲಿಬಾನ್ ಮತ್ತು ಇತರ ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಅಮೆರಿಕದ ಸೆನೆಟರ್‌ಗಳಾದ ಮ್ಯಾಗ್ಗಿ ಹಸ್ಸನ್ ಮತ್ತು ಕ್ರಿಸ್ ವ್ಯಾನ್ ಹೋಲೆನ್ ಹೇಳಿದ್ದಾರೆ.
ಭಯೋತ್ಪಾದನೆ ವಿರುದ್ಧ ದೃಢವಾದ ಕ್ರಮಗಳನ್ನು ಕೈಗೊಳ್ಳುವ ಮೂಲಕ ಹಾಗೂ ಜಾಗತಿಕ ಆರ್ಥಿಕತೆಯನ್ನು ಬಲಪಡಿಸಿ ಆಫ್ಗಾನಿಸ್ತಾನದಲ್ಲಿ ಪರಿಸ್ಥಿತಿಯನ್ನು ಸ್ಥಿರಗೊಳಿಸಲು ಪಾಕಿಸ್ತಾನ ಪ್ರಧಾನ ಪಾತ್ರ ವಹಿಸಬೇಕು ಎಂದು ಸೆನೆಟರ್ ಮ್ಯಾಗ್ಗಿ ಹಸ್ಸನ್ ಹೇಳಿದರು.
ಇಬ್ಬರೂ ಸೆನೆಟರ್‌ಗಳು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಭಯೋತ್ಪಾದನೆಯನ್ನು ನಿಗ್ರಹಿಸಲು ಪಾಕಿಸ್ತಾನದ ನಾಯಕರೊಡನೆ ಮಾತುಕತೆ ನಡೆಸುವುದು ಮುಖ್ಯವಾಗಿದೆ. ಭಯೋತ್ಪಾದನೆಗೆ ಬೆಂಬಲ ನೀಡದಂತೆ ಪಾಕ್‌ನ ಉನ್ನತ ಮಟ್ಟದ ನಾಯಕರಿಗೆ ನೇರವಾಗಿ ತಿಳಿಸುವುದು ಈ ಮಾತುಕತೆಯಿಂದ ಸಾಧ್ಯವಾಗಿದೆ. ಅಷ್ಟೇ ಅಲ್ಲ, ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಾಧ್ಯವಿರುವ ಕ್ರಮಗಳನ್ನುಎರಡೂ ಕಡೆಯವರು ಕಂಡುಕೊಳ್ಳುವುದು ಅತ್ಯಗತ್ಯವಾಗಿದೆಎಂದು ಹಸ್ಸನ್ ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.