ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಮಾರ್ಚ್‌ನಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರನ್ನು ಬಂಧಿಸಲಾಗಿದೆ.
ಅಮೆರಿಕ ಪೊಲೀಸರು ಭಾನುವಾರ ಮತ್ತು ಸೋಮವಾರ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸಿಖ್ ಸಮುದಾಯಕ್ಕೆ ಸೇರಿದ 17 ಜನರನ್ನು ಬಂಧಿಸಲಾಗಿದೆ.
ಬಂಧಿತರಿಂದ ಮಿಷನ್ ಗನ್ ಹಾಗೂ ಎ.ಕೆ–47 ಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಮೆರಿಕ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ಸ್ಯಾಕ್ರಮೆಂಟೊ ಕೌಂಟಿಯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇಬ್ಬರು ಯುವಕರ ನಡುವಿನ ವೈಯಕ್ತಿಕ ದ್ವೇಷ ಈ ಘಟನೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.