ವಾಷಿಂಗ್ಟನ್: ಇಸ್ರೇಲ್‌ನತ್ತ ನುಗ್ಗಿ ಬರುತ್ತಿದ್ದ ಇರಾನ್‌ನ ಹಲವು ಡ್ರೋನ್‌ಗಳನ್ನು ಅಮೆರಿಕ ಸೇನೆ ಹೊಡೆದುರುಳಿಸಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ ನಡೆಸುತ್ತಿರುವ ಇರಾನ್ ನಡೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಖಂಡಿಸಿದ್ದಾರೆ. ಮಿತ್ರ ರಾಷ್ಟ್ರ ಇಸ್ರೇಲ್ ಪರ ನಿಲ್ಲುವುದಾಗಿ ಹೇಳಿದ್ದ ಬೈಡನ್ ಇಸ್ರೇಲ್‌ಗೆ ಸೇನಾ ನೆರವನ್ನು ಒದಗಿಸಿದ್ದಾರೆ.
ಉಭಯ ರಾಷ್ಟ್ರಗಳ ನಡುವಿನ ಸ್ಥಿತಿಯ ಕುರಿತು ಮಾತನಾಡಿದ ಇಬ್ಬರು ಅಧಿಕಾರಿಗಳು, ಕೆಲವು ಕ್ಷಿಪಣಿಗಳನ್ನು ಅಮೆರಿಕ ನೌಕಾಪಡೆ ಹೊಡೆದುರುಳಿಸಿದೆ ಎಂದು ಹೇಳಿರುವುದಾಗಿ ವರದಿಯಾಗಿದೆ.
ಸಿರಿಯಾದ ಡಮಾಸ್ಕಸ್‌ನಲ್ಲಿ ಇರಾನ್ ಕಚೇರಿಯ ಮೇಲಿನ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.