ಢಾಕಾ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ 169 ಭಾರತೀಯ ವಿದ್ಯಾರ್ಥಿಗಳನ್ನು ಇಂದು ಏರ್ ಇಂಡಿಯಾ ವಿಮಾನದಲ್ಲಿ ಭಾರತಕ್ಕೆ ವಾಪಸ್ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ.
ವಿದ್ಯಾರ್ಥಿಗಳ ಹೊತ್ತು ತರುವ ವಿಮಾನ ರಾತ್ರಿ ವೇಳೆಗೆ ಶ್ರೀನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ.
ಢಾಕಾದಿಂದ ಭಾರತೀಯರನ್ನು ಕರೆತರುತ್ತಿರುವ ಐದನೇ ವಿಮಾನ ಇದಾಗಿದೆ. ಮಂಗಳವಾರ 169 ವಿದ್ಯಾರ್ಥಿಗಳನ್ನು ಶ್ರೀನಗರಕ್ಕೆ, ಸೋಮವಾರ 107 ಮಂದಿ ಭಾರತೀಯರನ್ನು ಮುಂಬೈಗೆ ಕರೆತರಲಾಗಿತ್ತು.
ಈಗಾಗಲೇ 405 ಮಂದಿ ಭಾರತೀಯರು ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಕೇಂದ್ರ ಸರ್ಕಾರ ಮೇ 7ರಿಂದ ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವವರನ್ನು ಸ್ವದೇಶಕ್ಕೆ ಕರೆತರುವ ಪ್ರಕ್ರಿಯೆ ಆರಂಭಿಸಿದೆ.
64 ಏರ್ ಇಂಡಿಯಾ ವಿಮಾನಗಳಲ್ಲಿ ವಿವಿಧ ದೇಶಗಳಲ್ಲಿ ನೆಲೆಸಿರುವ 15,000 ಮಂದಿ ಭಾರತೀಯರನ್ನು ಕರೆತರಲಾಗುತ್ತದೆ ಎಂದು ಸರ್ಕಾರ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.