ರೋಮ್: ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವಾಟಿಕನ್ ಮೂಲಗಳು ಗುರುವಾರ ತಿಳಿಸಿವೆ. ಅವರು ಶ್ವಾಸಕೋಶದ ಸೋಂಕಿನ ಕಾರಣ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು.
86ನೇ ವಯಸ್ಸಿನ ಫ್ರಾನ್ಸಿಸ್ ಅವರು ಯುವಕರಾಗಿದ್ದಾಗ ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದರು. ಆಗ ಅವರ ಒಂದು ಶ್ವಾಸಕೋಶವನ್ನು ತೆಗೆದುಹಾಕಲಾಗಿತ್ತು. ಬುಧವಾರ ಅವರಿಗೆ ಉಸಿರಾಟ ತೊಂದರೆ ಕಾಣಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸದ್ಯ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಚೆನ್ನಾಗಿ ವಿಶ್ರಾಂತಿಯನ್ನೂ ತೆಗೆದುಕೊಂಡಿದ್ದಾರೆ. ಪತ್ರಿಕೆ ಓದಿದ್ದಾರೆ, ಆಹಾರವನ್ನೂ ಸೇವಿಸಿದ್ದಾರೆ ಎಂದು ವರದಿಯಾಗಿದೆ.
ಚಿಕಿತ್ಸೆಯ ಕಾರಣದಿಂದ ಪೋಪ್ ಅವರು ಇನ್ನೂ ಕೆಲವು ದಿನಗಳ ಮಟ್ಟಿಗೆ ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ವಾಟಿಕನ್ ಮೂಲಗಳು ತಿಳಿಸಿವೆ.
ಫ್ರಾನ್ಸಿಸ್ ಅವರು ರೋಮನ್ ಕ್ಯಾಥೋಲಿಕ್ ಸಮುದಾಯದ 266ನೇ ಪೋಪ್ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.