ವ್ಯಾಟಿಕನ್ ಸಿಟಿ (ಎಪಿ): ವಿಶ್ರಾಂತ ಪೋಪ್, 95 ವರ್ಷದ 16ನೇ ಬೆನೆಡಿಕ್ಟ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ ಎಂದು ವ್ಯಾಟಿಕನ್ ವಕ್ತಾರರು ಬುಧವಾರ ತಿಳಿಸಿದ್ದಾರೆ.
‘ಪೋಪ್ ಫ್ರಾನ್ಸಿಸ್ ಬುಧವಾರ ಬೆನೆಡಿಕ್ಟ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಬೆನೆಡಿಕ್ಟ್ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. , ವೈದ್ಯರು ಬೆನೆಡಿಕ್ಟ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
600 ವರ್ಷಗಳ ಇತಿಹಾಸದಲ್ಲಿ ರಾಜೀನಾಮೆ ಸಲ್ಲಿಸಿದ ಮೊದಲ ಪೋಪ್ ಬೆನೆಡಿಕ್ಟ್ ಅವರಾಗಿದ್ದಾರೆ. ಅವರು 2013ರಲ್ಲಿ ನಿವೃತ್ತಿ ಹೊಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.