ಕೊಲಂಬೊ: ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನೆ ಅವರನ್ನು ನೇಮಕ ಮಾಡಲಾಗಿದೆ.
ಕೊಲಂಬೊದ ಫ್ಲವರ್ ರೋಡ್ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರ ಆಪ್ತರಾಗಿ ಗುರುತಿಸಿಕೊಂಡಿರುವ 73 ವರ್ಷದ ಗುಣವರ್ಧನೆ ಅವರಿಗೆ ವಿದೇಶಾಂಗ ಸಚಿವ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವವಿದೆ.
ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದಿದ್ದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದರು.
ಸಿಂಗಾಪುರಕ್ಕೆ ಪಲಾಯನ ಮಾಡಿರುವ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ರಾಜೀನಾಮೆಯಿಂದ ಶ್ರೀಲಂಕಾದ ಅಧ್ಯಕ್ಷ ಸ್ಥಾನ ತೆರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.