ADVERTISEMENT

ಟ್ರಂಪ್‌ ಮೇಲೆ ದಾಳಿ; ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ: ಖರ್ಗೆ

ಪಿಟಿಐ
Published 14 ಜುಲೈ 2024, 7:19 IST
Last Updated 14 ಜುಲೈ 2024, 7:19 IST
<div class="paragraphs"><p>ಡೊನಾಲ್ಡ್‌ ಟ್ರಂಪ್‌,&nbsp;ಮಲ್ಲಿಕಾರ್ಜುನ ಖರ್ಗೆ</p></div>

ಡೊನಾಲ್ಡ್‌ ಟ್ರಂಪ್‌, ಮಲ್ಲಿಕಾರ್ಜುನ ಖರ್ಗೆ

   

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯಾವುದೇ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜದಲ್ಲಿ ಇಂತಹ ಹಿಂಸಾಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದಿರುವ ದಾಳಿಯಿಂದ ತೀವ್ರ ಆಘಾತವಾಗಿದೆ. ಈ ಹೇಯ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇಂತಹ ಹಿಂಸಾಚಾರಕ್ಕೆ ಯಾವುದೇ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜದಲ್ಲಿ ಅವಕಾಶವಿಲ್ಲ. ಭಾರತವು ಅಮೆರಿಕದ ಜನರೊಂದಿಗೆ ನಿಂತಿದೆ. ಗಾಯಗೊಂಡವರ ಕುಟುಂಬಕ್ಕೆ ನಾವು ಸಂತಾಪ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ADVERTISEMENT

ಪೆನ್ಸಿಲ್ವೇನಿಯಾದಲ್ಲಿ ಶನಿವಾರ ಸಂಜೆ ಆಯೋಜನೆಗೊಂಡಿದ್ದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಡೊನಾಲ್ಡ್‌ ಟ್ರಂಪ್ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ 78 ವರ್ಷದ ಟ್ರಂಪ್ ಅವರಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಹಲವು ಜಾಗತಿಕ ನಾಯಕರು ಟ್ರಂಪ್‌ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.