ವಾಷಿಂಗ್ಟನ್: ಅಮೆರಿಕದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಬೃಹತ್ ಪ್ರಮಾಣದಲ್ಲಿ ಕಡಿತಗೊಳಿಸುವ ಸುಳಿವನ್ನು ಕಾರ್ಯದಕ್ಷತಾ ಇಲಾಖೆ (ಡಿಒಜಿಇ) ಉಸ್ತುವಾರಿಯಾಗಿ ನೇಮಕ ಆಗಿರುವ ಭಾರತ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ನೀಡಿದ್ದಾರೆ.
ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವೇಕ್ ಜೊತೆಗೆ ಟೆಸ್ಲಾ ಮಾಲೀಕ ಇಲಾನ್ ಮಸ್ಕ್ ಅವರನ್ನೂ ಡಿಒಜಿಇ ಉಸ್ತುವಾರಿಯಾಗಿ ನೇಮಿಸಿದ್ದಾರೆ.
‘ಮಸ್ಕ್ ಹಾಗೂ ನಾನು ಡಿಒಜಿಇ ಜವಾಬ್ದಾರಿ ವಹಿಸಿಕೊಂಡ ನಂತರ, ಸರ್ಕಾರದಲ್ಲಿ ನೇರವಾಗಿ ಆಯ್ಕೆಯಾಗದ ನೌಕರರನ್ನು ಸಾಮೂಹಿಕವಾಗಿ ತೆಗೆಯಲು ಕ್ರಮಕೈಗೊಳ್ಳುತ್ತೇವೆ. ಇದು ನಾವು ದೇಶರಕ್ಷಣೆಗೆ ಕೈಗೊಳ್ಳುವ ಕ್ರಮವಾಗಿದೆ’ ಎಂದು ತಿಳಿಸಿದ್ದಾರೆ.
ಫ್ಲಾರಿಡಾದ ಮರ್–ಅ– ಲಾಗೊದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು,
‘ನಾಲ್ಕು ವರ್ಷಗಳಲ್ಲಿ ದೇಶ ಸಾಕಷ್ಟು ಹಿನ್ನಡೆ ಅನುಭವಿಸಿದೆ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕಿದೆ. ದೇಶವು ಹಿನ್ನಡೆ ಅನುಭವಿಸುವಾಗ ಸುಮ್ಮನಿರಲು ಸಾಧ್ಯವಿಲ್ಲ. ದೇಶಕ್ಕೆ ಮುಂದಿನ ದಿನಗಳು ಒಳ್ಳೆಯ ದಿನವಾಗಿರಲಿವೆ’ ಎಂದು ರಾಮಸ್ವಾಮಿ ಪ್ರತಿಪಾದಿಸಿದರು.
ಕೆಲಸದ ಪ್ರಗತಿ– ನೇರಪ್ರಸಾರ: ‘ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯಲ್ಲಿ ಸಾಧಿಸಿದ ಪ್ರಗತಿಯ ಕುರಿತಂತೆ ಅಮೆರಿಕದ ಜನರಿಗೆ ಮಾಹಿತಿ ನೀಡುವ ದೃಷ್ಟಿಯಿಂದ ಪ್ರತಿ ವಾರವೂ ನೇರ ಪ್ರಸಾರ ಮಾಡಲಾಗುವುದು’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.