ADVERTISEMENT

ಕದನ ವಿರಾಮ ನಂತರವೂ ಹಮಾಸ್‌ ವಿರುದ್ಧ ಯುದ್ಧ ಮುಂದುವರಿಯಲಿದೆ: ನೆತನ್ಯಾಹು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ನವೆಂಬರ್ 2023, 4:26 IST
Last Updated 22 ನವೆಂಬರ್ 2023, 4:26 IST
<div class="paragraphs"><p>ಬೆಂಜಾಮಿನ್‌ ನೆತನ್ಯಾಹು</p></div>

ಬೆಂಜಾಮಿನ್‌ ನೆತನ್ಯಾಹು

   

ಟೆಲ್ ಅವೀವ್: ಯುದ್ಧಬಾಧಿತ ಗಾಜಾದಲ್ಲಿ ಹಮಾಸ್‌ನ ಬಂಡುಕೋರರು ಇರಿಸಿಕೊಂಡಿರುವ ಒತ್ತೆಯಾಳುಗಳ ಬಿಡುಗಡೆಗೆ ಕಾಲ ಸನ್ನಿಹಿತವಾಗಿದ್ದು, ಈ ಸಂಬಂಧ ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ಮಧ್ಯೆ ಒಪ್ಪಂದ ಏರ್ಪಟ್ಟಿದೆ.

‘ಒತ್ತೆಯಾಳುಗಳ ಬಿಡುಗಡೆ ವಿಚಾರದಲ್ಲಿ ಪ್ರಗತಿ ಕಂಡು ಬಂದಿದೆ’ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಜತೆಗೆ ಒತ್ತೆಯಾಳುಗಳು ಸ್ವದೇಶಕ್ಕೆ ಹಿಂದಿರುಗಿದ ಬಳಿಕವೂ ಹಮಾಸ್‌ ವಿರುದ್ಧ ಇಸ್ರೇಲ್ ಯುದ್ಧ ಮುಂದುವರಿಸಲಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಬಳಿಕ ನಾವು ಯುದ್ಧ ನಿಲ್ಲಿಸುತ್ತೇವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರವಾಗಿ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ಹಮಾಸ್ ವಿರುದ್ಧ ನಾವು ಯುದ್ಧ ಸಾರಿದ್ದೇವೆ. ಯುದ್ಧವನ್ನು ಮುಂದುವರಿಸುವುದು ಖಚಿತ ಎಂದು ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ಗಾಜಾದಲ್ಲಿ ನಾಲ್ಕು ದಿನಗಳ ಯುದ್ಧ ವಿರಾಮ ಕುರಿತಾದ ಪ್ಯಾಲೆಸ್ಟೀನ್‌ನ ಹಮಾಸ್ ಬಂಡುಕೋರರ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಲು ಇಸ್ರೇಲ್ ಸರ್ಕಾರ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಾಲ್ಕು ದಿನಗಳಲ್ಲಿ 50 ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲಾಗುವುದು. ಈ ಸಮಯದಲ್ಲಿ ಯುದ್ಧ ವಿರಾಮ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯದ ಹೇಳಿಕೆ ತಿಳಿಸಿದೆ.

ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಕತಾರ್‌ ಮತ್ತು ಅಮೆರಿಕದ ಅಧಿಕಾರಿಗಳು, ಇಸ್ರೇಲ್ ಮತ್ತು ಹಮಾಸ್‌ ಒಪ್ಪಂದವು ಸನ್ನಿಹಿತವಾಗಿದೆ ಎಂದು ಕೆಲ ದಿನಗಳಿಂದ ಹೇಳುತ್ತಿದ್ದರು. ಈಗ ಅದು ನಿಜವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.