ಟೆಹರಾನ್: ಪ್ರಾದೇಶಿಕ ಉದ್ವಿಗ್ನತೆಯಿಂದಾಗಿ ಇರಾಕ್‌ನ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು (ಶನಿವಾರ) ಮುಂಜಾನೆ ಇರಾನ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇರಾಕ್ ದೇಶದಾದ್ಯಂತ ವಿಮಾನಗಳ ಹಾರಾಟ ನಿರ್ಬಂಧಿಸಿದೆ ಎಂದು ಇರಾಕ್ ಸುದ್ದಿಸಂಸ್ಥೆ ‘ಐಎನ್‌ಎ’ ತಿಳಿಸಿದೆ.
ಸರ್ಕಾರದ ಮುಂದಿನ ಆದೇಶದವರೆಗೆ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧ ಮುಂದುವರಿಯಲಿದೆ ಎಂದು ಇರಾಕ್‌ನ ಸಾರಿಗೆ ಸಚಿವಾಲಯ ತಿಳಿಸಿದೆ.
ಸಿರಿಯಾದ ಮೇಲೂ ಇಸ್ರೇಲ್ ದಾಳಿ: ಸಿರಿಯಾದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿನ ಕೆಲವು ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಇಸ್ರೇಲ್ ಉಡಾಯಿಸಿದ್ದ ಕ್ಷಿಪಣಿಗಳನ್ನು ನಾಶ ಮಾಡಿದ್ದಾಗಿ ಸಿರಿಯಾದ ರಕ್ಷಣಾ ಪಡೆಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.