ADVERTISEMENT

25 ವರ್ಷಗಳ ಹಿಂದೆ | ಸೆಪ್ಟೆಂಬರ್‌ನಲ್ಲೇ ಚುನಾವಣೆ: ಆಯೋಗ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 22:11 IST
Last Updated 2 ಜುಲೈ 2024, 22:11 IST
   

ಸೆಪ್ಟೆಂಬರ್‌ನಲ್ಲೇ ಚುನಾವಣೆ: ಆಯೋಗ ನಿರ್ಧಾರ

ನವದೆಹಲಿ, ಜುಲೈ 2 (ಪಿಟಿಐ)– ಈ ಹಿಂದೆ ನಿಗದಿಪಡಿಸಿದಂತೆ ಜಮ್ಮು ಮತ್ತು ಕಾಶ್ಮೀರ ಸಹಿತ ಎಲ್ಲಾ ಲೋಕಸಭಾ ಸ್ಥಾನಗಳಿಗೆ ಸೆಪ್ಟೆಂಬರ್‌ನಲ್ಲೇ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಸ್ಪಷ್ಟಪಡಿಸಿದೆ.

ಈ ಮೂಲಕ ಕಾರ್ಗಿಲ್‌ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಮುಂದೂಡುವ ಸಾಧ್ಯತೆಗಳ ಬಗ್ಗೆ ಎದ್ದ ಊಹಾಪೋಹಗಳಿಗೆ ತೆರೆಬಿದ್ದಿದೆ.

ADVERTISEMENT

ಪ್ರಸಕ್ತ ವಿದ್ಯಮಾನದ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವುದಕ್ಕೆ ಸರ್ಕಾರದ ಮನಃಸ್ಥಿತಿಯೇನು ಎಂಬುದನ್ನು ತಿಳಿಯುವುದಕ್ಕಾಗಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ 45 ನಿಮಿಷ ಮಾತುಕತೆ ನಡೆಸಿದ ಬಳಿಕ ಮುಖ್ಯ ಚುನಾವಣಾ ಆಯುಕ್ತ ಎಂ.ಎಸ್. ಗಿಲ್ ಈ ಸ್ಪಷ್ಟನೆ ನೀಡಿದರು.

***

ನ್ಯಾಯಾಲಯದಲ್ಲಿ ಇಂಡಿ ಶಾಸಕ ಶರಣು

ಬೆಂಗಳೂರು, ಜುಲೈ 2– ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಇಂಡಿ ಶಾಸಕ ರವಿಕಾಂತ ಪಾಟೀಲ ಅವರು ಗುರುವಾರ ಮಹಾರಾಷ್ಟ್ರದ ಸೊಲ್ಲಾಪುರ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟೀಲ ಅವರು ಇದೇ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಅದನ್ನು ತಿರಸ್ಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.