ನವದೆಹಲಿ, ನ 9 (ಪಿಟಿಐ) – ಉತ್ತರ ಪ್ರದೇಶ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ಬದಲಾವಣೆ ಮಾಡಲು ಬಿಜೆಪಿ ಇಂದು ನಿರ್ಧರಿಸಿತು.
ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ರಾಂಪ್ರಕಾಶ್ ಗುಪ್ತ ಅವರು ಹೊಸ ಮುಖ್ಯಮಂತ್ರಿ ಆಗಲಿದ್ದಾರೆ.
ಗುಪ್ತ ಅವರು ದಿನಾಂಕ 11ರಂದು ಗುರುವಾರ ಬೆಳಗ್ಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಉತ್ತರ ಪ್ರದೇಶ ರಾಜ್ಯಪಾಲ ಸೂರಜ್ ಭಾನ್ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.