ADVERTISEMENT

25 ವರ್ಷಗಳ ಹಿಂದೆ: ಪಂಚಾಯಿತಿ ಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಜಾವಾಣಿ ವಿಶೇಷ
Published 31 ಮಾರ್ಚ್ 2024, 23:55 IST
Last Updated 31 ಮಾರ್ಚ್ 2024, 23:55 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಪಂಚಾಯಿತಿ ಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ, ಮಾರ್ಚ್‌ 31– ಕರ್ನಾಟಕ ಗ್ರಾಮ ಪಂಚಾಯಿತಿಗಳಿಗೆ ಆರು ವಾರಗಳೊಳಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿದ್ದ ಆಜ್ಞೆಗೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿತು.

ಸುಪ್ರೀಂ ಕೋರ್ಟ್‌ನ ಈ ಮಧ್ಯಂತರ ಆದೇಶದಿಂದ ನಾಳೆಯಿಂದ ನಡೆಯಬೇಕಾಗಿದ್ದ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಿದಂತಾಗಿದೆ. ನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಮತ್ತು ಆರ್.ಸಿ. ಲಹೋಟಿ ಅವರಿದ್ದ ನ್ಯಾಯಪೀಠವು ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಿಚಾರಣೆಗೆ ಎತ್ತಿಕೊಂಡು ಈ ಆದೇಶ ನೀಡಿತು.

ಉಪ ಸಭಾಪತಿ ಅವಿರೋಧ ಆಯ್ಕೆ ಖಚಿತ

ಬೆಂಗಳೂರು, ಮಾರ್ಚ್‌ 31– ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ವಿರೋಧ ಪಕ್ಷಗಳು ಜನತಾದಳದ ಅಭ್ಯರ್ಥಿಯನ್ನು ಬೆಂಬಲಿಸಿರುವುದರಿಂದ ಅಭ್ಯರ್ಥಿ ಡೇವಿಡ್ ಸಿಮೆಯೋನ್ ಅವರು ಈ ಸ್ಥಾನಕ್ಕೆ ಆಯ್ಕೆಯಾಗುವುದು ಖಚಿತವಾಗಿದೆ. ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಪರಿಷತ್ತಿನ ವಿರೋಧ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿದ ಪರಿಣಾ ಮವಾಗಿ ಸರ್ವಸಮ್ಮತ ಅಭ್ಯರ್ಥಿ ಆಯ್ಕೆಗೆ ಅವರೆಲ್ಲರೂ ಒಲವು ತೋರಿರುವುದರಿಂದ ಸಿಮೆಯೋನ್ ಗೆಲುವಿಗೆ ಹಾದಿ ಸುಗಮವಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.